Karnataka Grama Panchayath Secretary & SDA Recruitment 2021:RDPR Karnataka Recruitment 2021 For 6406 Grama Panchayat Secretary And SDA Assistant Posts, Check Details Here
ಹುದ್ದೆಗಳ ವಿವರ:
ಕರ್ನಾಟಕ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಪ್ರಸ್ತುತ ಸೇವೆಯಲ್ಲಿರುವ ಸಿಬ್ಬಂದಿಗಳಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆದೇಶ ಹೊರಡಿಸಲಾಗಿದೆ
6406 ಗ್ರಾಮ ಪಂಚಾಯತಿ ಕಾರ್ಯದರ್ಶಿ & SDA ಹುದ್ದೆಗಳ ನೇಮಕಾತಿ 2021: ಇದು Graama Panchayat Secretary & Rural Development Assistant (Grade-II) 3,827 ಹುದ್ದೆಗಳು & Second Division Account Assistants ( SDAA ) 2,579 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತಹ ಮಹತ್ವದ ಮಾಹಿತಿ.!!
ಗ್ರಾಮ ಪಂಚಾಯತಿಗಳಲ್ಲಿನ ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್-1 & 2) ಹಾಗೂ SDA ಹುದ್ದೆಗಳಿಗೆ ನೇಮಕಾತಿ ವಿಧಾನವನ್ನು ನಿಗಧಿಪಡಿಸಿ 05-09-2021ರಂದು ಹೊರಡಿಸಿದ ಸರಕಾರದ ಮಹತ್ವದ ಆದೇಶಕ್ಕೆ 07-10-2021ರಂದು ಮಾಡಿದ ತಿದ್ದುಪಡಿ ಆದೇಶ ಇದೀಗ ಲಭ್ಯವಾಗಿದೆ
Organization Name : | Rural Development and Panchayat Raj Development |
Employment Category | Karnataka Govt Jobs |
Total No.Of Vacancies: | 6406{ Expected Posts) |
Job Location: | Karnataka |
Official Website | panchamitra.kar.nic.in /http://kea.kar.nic.in/rdpr.htm |
Applying Mode | Online( Applications Starting Date Given Below) |
Name of Post | Gram Panchayat Grade 2 & SDA Posts |
Notification | Given Below |
GP Security Grade-II-3,827 Posts
SDAA-2579 Posts
Education/Qualifications Details:
◼SDAA ಹುದ್ದೆಗಳಿಗೆ PUC Commerce ಪಾಸಾದ ಅಭ್ಯರ್ಥಿಗಳು ಮಾತ್ರ ಅರ್ಹರು.
◼ಕಾರ್ಯದರ್ಶಿ ಗ್ರೇಡ್-2 ಹುದ್ದೆಗಳಿಗೆ PUC ಪಾಸಾದ ಎಲ್ಲಾ ಅಭ್ಯರ್ಥಿಗಳು ಅರ್ಹರು.!!
ಆದರೆ
More Information Age Limit Application Fee Details Download Notification Pdf
Gram Panchayat Recruitment Notification Link:
IMPORTANT DATES:
Online Application Starting Date :ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಈ ಹುದ್ದೆಗಳಿಗೆ ಚಾಲನೆ ನೀಡಬಹುದು ದಯವಿಟ್ಟು ನಿರೀಕ್ಷಿಸಿ ನಿಮ್ಮ ಗ್ರೂಪ್ ನಲ್ಲಿ
Alerts:
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ www.newssuper.co ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.
ರಾಜ್ಯದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿ ಆದೇಶ ಪ್ರಕಟಿಸಿದೆ. ಅಂದಹಾಗೆ ಈ ಹುದ್ದೆಗಳಿಗೆ ಪ್ರಸ್ತುತ ಸೇವೆಯಲ್ಲಿರುವ ಗ್ರಾಮ ಪಂಚಾಯಿತಿ ನೌಕರರ ವಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿರುವುದು. ಇದರಿಂದ ಗ್ರಾಮ ಪಂಚಾಯ್ತಿ ನೌಕರರಿಗೆ ಬಡ್ತಿ ಭಾಗ್ಯವು ದೊರೆಯಲಿದೆ.
ಕೊರೊನಾ ಕಾರಣದಿಂದ ನೇರ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿತ್ತು. ಇದೀಗ ತಡೆಯನ್ನು ತೆರವುಗೊಳಿಸಲಾಗಿದೆ. ಆ ಮೂಲಕ, ಹಲವು ವರ್ಷಗಳಿಂದ ಪದೋನ್ನತಿಗೆ ಕಾಯುತ್ತಿರುವ ಗ್ರಾಮ ಪಂಚಾಯ್ತಿಯ ವಿವಿಧ ವೃಂದಗಳ ಸಿಬ್ಬಂದಿಗೆ ಅನುಕೂಲ ಆಗಲಿದೆ.
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ (ಗ್ರೇಡ್-2) ಒಟ್ಟು ಖಾಲಿ ಹುದ್ದೆಗಳು 1143 ಇದ್ದು ಗ್ರಾಮ ಪಂಚಾಯ್ತಿ ನೌಕರರಿಂದ 800 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ದ್ವಿತೀಯ ದರ್ಜೆ ಲೆಕ್ಕಸಹಾಯಕರ ಹುದ್ದೆಗಳ ಪೈಕಿ ಒಟ್ಟು 316 ಹುದ್ದೆಗಳು ಖಾಲಿ ಇದ್ದು ಗ್ರಾಮ ಪಂಚಾಯ್ತಿ ನೌಕರರಿಂದ 158 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಗ್ರಾಮ ಪಂಚಾಯ್ತಿ ಕಾರ್ಯದರ್ಶಿ (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕಸಹಾಯಕರ ಹುದ್ದೆಗಳಿಗೆ ಬಿಲ್ ಕಲೆಕ್ಟರ್, ಅಕೌಂಟೆಂಟ್, ಕ್ಲರ್ಕ್, ಟೈಪಿಸ್ಟ್, ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್ ವೃಂದದ ಹುದ್ದೆಗಳಿಂದ ನೇರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಎಲ್ಲ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (ಆರ್ಡಿಪಿಆರ್) ಪ್ರಧಾನ ಕಾರ್ಯದರ್ಶಿ ರವರು ಸೂಚಿಸಿದ್ದಾರೆ.
ಗ್ರಾಮ ಪಂಚಾಯ್ತಿ ಕಾರ್ಯದರ್ಶಿ (ಗ್ರೇಡ್-2) ವೃಂದದ ಶೇಕಡ 70 ರಷ್ಟು ಹುದ್ದೆಗಳನ್ನು 3:2 ಅನುಪಾತದಲ್ಲಿ ನೇಮಕಾತಿಗೆ ಅವಕಾಶ ನೀಡಲಾಗಿದೆ. ಅಂದರೆ, ಮೊದಲ ಮೂರು ಹುದ್ದೆಗಳನ್ನು ಬಿಲ್ ಕಲೆಕ್ಟರ್ ವೃಂದದ ನೌಕರರಿಂದ, ನಂತರ ಎರಡು ಹುದ್ದೆಗಳನ್ನು ಅಕೌಂಟಂಟ್, ಕ್ಲರ್ಕ್, ಟೈಪಿಸ್ಟ್, ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಪ್ರಸ್ತುತ ಈ ನೇರ ನೇಮಕಾತಿಗೆ ಅವಕಾಶ ನೀಡಲು 'ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನಿಯಮಗಳು-2008'ಕ್ಕೆ) ತಿದ್ದುಪಡಿ ತರಬೇಕಾಗಿದೆ. ಆದರೆ, ತಿದ್ದುಪಡಿಗೆ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ಅದರ ಬದಲು ಕಾರ್ಯಕಾರಿ ಆದೇಶದ ಮೂಲಕ ನೇಮಕಾತಿ ವಿಧಾನವನ್ನು ರೂಪಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನೇಮಕಾತಿ ಹೇಗೆ?
ಗ್ರಾಮ ಪಂಚಾಯ್ತಿಯಲ್ಲಿ ಕನಿಷ್ಠ 6 ವರ್ಷ ಕೆಲಸ ಮಾಡಿದ ಸಿಬ್ಬಂದಿ ನೇರ ನೇಮಕಾತಿಗೆ ಅರ್ಹತೆ ಪಡೆಯಲಿದ್ದಾರೆ. ಈ ರೀತಿ ಬಡ್ತಿಗೆ ಅರ್ಹತೆ ಪಡೆದವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ 100 ಅಂಕಗಳ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.
ಪ್ರಸ್ತುತ ಸೇವೆಯಲ್ಲಿರುವ ಸಿಬ್ಬಂದಿಯ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೀಸಲಾತಿ ನಿಯಮ ಅನ್ವಯ ಆಯ್ಕೆಪಟ್ಟಿ ಪ್ರಕಟಿಸಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಉಳಿದ ಶೇಕಡ. 30 ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ ಶೇಕಡ 50 ರಷ್ಟು ಹುದ್ದೆಗಳನ್ನು 1:1 ಅನುಪಾತದಲ್ಲಿ ನೇಮಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಉಳಿದ ಶೇಕಡ.50 ರಷ್ಟು ಖಾಲಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
Post Source: Vijaya Karnataka Web (More Info: Click Here